ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಹಾಗೂ ಕ್ರೈಸ್ತ್ ಕಿಂಗ್ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ವಿಜ್ಞಾನ ವಸ್ತು ಮಾದರಿ ಪ್ರದರ್ಶನದ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ಶ್ರೀನಿವಾಸ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ಶಿಕ್ಷಕರನ್ನು ಸಂಸ್ಥೆಯ ಮುಖ್ಯಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.































