Friday, November 6, 2026
Google search engine
Homeಕಾರ್ಕಳಪ್ರದೀಪ್ ಪೂಜಾರಿ ಪ್ರಕರಣದಲ್ಲಿ ಕರ್ತವ್ಯ ಲೋಪ; ಪಿಎಸ್‌ಐ ವರ್ಗಾವಣೆ, ಇಬ್ಬರು ಅಮಾನತು

ಪ್ರದೀಪ್ ಪೂಜಾರಿ ಪ್ರಕರಣದಲ್ಲಿ ಕರ್ತವ್ಯ ಲೋಪ; ಪಿಎಸ್‌ಐ ವರ್ಗಾವಣೆ, ಇಬ್ಬರು ಅಮಾನತು

ಪೆರ್ಡೂರಿನ ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಪ್ರಕರಣದ ಕುರಿತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ವಿಚಾರಣೆಯ ವರದಿಯನ್ನು ಪಶ್ಚಿಮ ವಲಯದ ಡಿಐಜಿಗೆ ಸಲ್ಲಿಸಲಾಗಿದೆ. ಈ ವರದಿಯ ಆಧಾರದ ಮೇಲೆ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ವರ್ಗಾಯಿಸಿ, ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಆರಂಭಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ಕರ್ತವ್ಯದ ವೇಳೆ ನಿರ್ಲಕ್ಷ್ಯ ವಹಿಸಿರುವುದು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಸಲ್ಲಿಸಿದ ವರದಿಯಲ್ಲಿ ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧವೂ ಮುಂದಿನ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಇಲಾಖೆಯ ಈ ಕ್ರಮ ಮಹತ್ವ ಪಡೆದಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments