ಎಚ್‌ಐವಿ/ಏಡ್ಸ್ ತಡೆಗಟ್ಟುವಿಕೆ ಹಾಗೂ ಜಾಗೃತಿಯನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ಐಇಸಿ ಪ್ರಚಾರ ಆಂದೋಲನ ಕಾರ್ಯಕ್ರಮವು ಕಾರ್ಕಳದ ಶ್ರೀ ವೆಂಕಟರಮಣ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.
ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಕಾರ್ಕಳ, ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಸರ್ಕಾರಿ ಬಿ.ಎಸ್.ಸಿ. ನರ್ಸಿಂಗ್ ಕಾಲೇಜು ಕಾರ್ಕಳ ಹಾಗೂ ಶ್ರೀ ವೆಂಕಟರಮಣ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಸರ್ಕಾರಿ ಬಿ.ಎಸ್.ಸಿ. ನರ್ಸಿಂಗ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳು ಪ್ಲ್ಯಾಶ್‌ಮಾಬ್ ಹಾಗೂ ಬೀದಿನಾಟಕ ಪ್ರದರ್ಶಿಸುವ ಮೂಲಕ ಎಚ್‌ಐವಿ/ಏಡ್ಸ್ ತಡೆಗಟ್ಟುವಿಕೆ ಮತ್ತು ಜಾಗೃತಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಬಿಂದಿಯಾ ಶೆಟ್ಟಿ ಹಾಗೂ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೀತಾ ಜಿ. ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಭಾಗ್ಯ ಹಾಗೂ ಎನ್‌ಎಸ್‌ಎಸ್ ಘಟಕದ ನಾಯಕಿಯರಾದ ಮುನೀರಾ ಮತ್ತು ರಮ್ಯ ಉಪಸ್ಥಿತರಿದ್ದರು.
ಆಶೀಯಾ ಕಾರ್ಯಕ್ರಮ ನಿರೂಪಿಸಿದರು. ಪೂಜಾ ವಂದಿಸಿದರು.































