ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾಲಯ ಮತ್ತು ವಿದ್ಯಾಕೇಂದ್ರದ
ಪ್ರೌಢಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಹದಿಹರೆಯದ ಶಿಕ್ಷಣ, ಆಪ್ತ ಸಮಾಲೋಚನೆ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು.
ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಸರಸ್ವತಿ ಮತ್ತು ಪವಿತ್ರ ಇವರು ದೈಹಿಕ ಮತ್ತು ಮಾನಸಿಕ ಬದಲಾವಣೆ, ಒತ್ತಡ, ಕೆಟ್ಟ ಹವ್ಯಾಸ , ಆರೋಗ್ಯ ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಅಪರ್ಣಾ ಆಚಾರ್, ಶಿಕ್ಷಕರಾದ ಮಹೇಶ್ ಹೈಕಾಡಿ, ವೇದವ್ಯಾಸ ತಂತ್ರಿ ಮಡಾಮಕ್ಕಿ, ವಿಶ್ವಾಸ್, ರಕ್ಷಿತ್, ಪರಸು, ನಂದನ್, ಸುಶಾಂತ್, ಪ್ರೀತಿ ಬಿ ಕೆ, ಪ್ರೀತಿ ಶೆಟ್ಟಿ
ಉಪಸ್ಥಿತರಿದ್ದರು.































