ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಚಿತ್ರಕಲೆ ಸ್ಪರ್ಧೆಯಲ್ಲಿ ಎಸ್.ಆರ್. ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪರೀಕ್ಷಿತ್ ಆಚಾರ್ಯ ಪ್ರಥಮ ಸ್ಥಾನ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಚಿರಂತನ್ ಐತಾಳ್ ಪ್ರಥಮ ಸ್ಥಾನ ಪಡೆದು ಇಬ್ಬರೂ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.































