Saturday, November 14, 2026
Google search engine
Homeಕಾರ್ಕಳಕಾರ್ಕಳ: ಶ್ರೀ ಭುವನೇಂದ್ರ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಪದ್ಮನಾಭ ಗೌಡ ನಿಧನ

ಕಾರ್ಕಳ: ಶ್ರೀ ಭುವನೇಂದ್ರ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಪದ್ಮನಾಭ ಗೌಡ ನಿಧನ

ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಚಾರ್ಯ, ಕಾರ್ಕಳ ಸಾಹಿತ್ಯ ಸಂಘದ ಪ್ರಧಾನ ಕಾರ್ಯದರ್ಶಿ, ಕಾರ್ಕಳ ಯಕ್ಷ ಕಲಾರಂಗದ ಪ್ರಧಾನ ಸಂಚಾಲಕ ಪ್ರೊ. ಬಿ ಪದ್ಮನಾಭ ಗೌಡ ಇಂದು ಬೆಳಿಗ್ಗೆ ನಿಧನರಾದರು.

ಮೂಲತಃ ಸುಳ್ಯ ತಾಲೂಕಿನ ಬಿಳಿಮಲೆಯವರಾದ ಇವರು ಎಂ.ಎಸ್ಸಿ ಪದವಿ ಬಳಿಕ ಕಾರ್ಕಳದ ಶ್ರೀ ಭುವನೇಂದ್ರ ಪದವಿ ಕಾಲೇಜಿನಲ್ಲಿ ಗಣಿತಶಾಸ್ತ್ರ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಹಾಗೂ ಪ್ರಾಂಶುಪಾಲರಾಗಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕಲಾ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಪದ್ಮನಾಭ ಗೌಡರು ಕಾರ್ಕಳ ಯಕ್ಷಕಲಾ ರಂಗವನ್ನು ಸ್ಥಾಪಿಸಿದ್ದರು. ಕಾರ್ಕಳ ಗೌಡ ಸಂಘ, ಲಯನ್ಸ್ ಕ್ಲಬ್ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು.

ಸಾಹಿತ್ಯ ಸಂಘ ಕಾರ್ಕಳದ ಮೂಲಕ ಹಲವಾರು ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ವಿಜ್ಞಾನ ಸಂಬಂಧಿತ ಕಾರ್ಯಕ್ರಮಗಳ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರೊ. ಎಂ. ರಾಮಚಂದ್ರ ಅವರ ನಿಧನದ ಬಳಿಕ ಸಾಹಿತ್ಯ ಸಂಘದ ಜವಾಬ್ದಾರಿಯನ್ನು ವಹಿಸಿಕೊಂಡು ಮುನ್ನಡೆಸಿದ್ದರು. ಸರಳ ವ್ಯಕ್ತಿತ್ವ ಹಾಗೂ ಆತ್ಮೀಯ ಒಡನಾಟದಿಂದ ಎಲ್ಲರ ಪ್ರೀತಿ, ಗೌರವಕ್ಕೆ ಪಾತ್ರರಾಗಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 2 ಗಂಟೆಗೆ ಕಾರ್ಕಳ ತೆಳ್ಳಾರು 12ನೇ ರಸ್ತೆಯಲ್ಲಿರುವ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments