ಭಾರತದ ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಹಾಗೂ ಮಿಷನ್ ಲೈಫ್ (Mission LiFE) ಸಹಯೋಗದಲ್ಲಿ “ಇಂಧನ ಭದ್ರತೆಗಾಗಿ ಇಂಧನ ರಕ್ಷಣೆ” ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸಾನಿಧ್ಯ ಆಚಾರ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಅಭಿನಂದನೆ ಸಲ್ಲಿಸಿ, ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.































