Monday, November 16, 2026
Google search engine
Homeಕಾರ್ಕಳಸರಕಾರಿ ಶಾಲೆಯ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜ! ಮಕ್ಕಳಿಂದ ಮೋದಿ ಪರ...

ಸರಕಾರಿ ಶಾಲೆಯ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜ! ಮಕ್ಕಳಿಂದ ಮೋದಿ ಪರ ಜಯಘೋಷ

ಸರಕಾರಿ ಶಾಲೆಯೊಂದರ ಕಾರ್ಯಕ್ರಮದಲ್ಲಿ ರಾಜಕೀಯ ಪಕ್ಷದ ವಿರುದ್ಧ ಹೇಳಿಕೆ ನೀಡುವುದರ ಜೊತೆಗೆ ವಿದ್ಯಾರ್ಥಿಗಳಿಂದ ಪ್ರಧಾನಿ ನರೇಂದ್ರ ಮೋದಿ ಪರ ಜಯಘೋಷ ಹಾಕಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯಲ್ಲಿ ನಡೆದಿದೆ.

ನ. 14ರಂದು ಪೂಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಶಾಲೆಯ ಅಭಿವೃದ್ಧಿಗೆ ನೆರವು ನೀಡಿದ ಖಾಸಗಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಶಾಲೆಗೆ ಒಂದು ರೂಪಾಯಿ ಸಹಾಯ ಮಾಡದ ದರಿದ್ರ ಪಾರ್ಟಿ ಕಾಂಗ್ರೆಸ್ ಬೆಳ್ತಂಗಡಿಯಲ್ಲಿದೆ. ಇಂತಹ ಪಕ್ಷವನ್ನು ನಂಬಿ ಹೋಗಬೇಡಿ. ದೇಶ ನರೇಂದ್ರ ಮೋದಿಯವರ ನೇತೃತ್ವದಲ್ಲಿದೆ” ಎಂದು ಅವರು ಭಾಷಣ ಮಾಡಿದ್ದಾರೆ ಎನ್ನಲಾಗಿದೆ.

ಭಾಷಣದ ಕೊನೆಯಲ್ಲಿ ಭಾರತ ದೇಶಕ್ಕೆ ಜಯಘೋಷ ಕೂಗುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪ್ರಧಾನಿ ನರೇಂದ್ರ ಮೋದಿಯವರಿಗೂ ಜಯಘೋಷ ಹಾಕಿಸಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments