Thursday, November 19, 2026
Google search engine
Homeಕಾರ್ಕಳಕಾರ್ಕಳ: ಎಸ್.ವಿ.ಟಿ. ಪ್ರೌಢಶಾಲಾ ವಿದ್ಯಾರ್ಥಿನಿ ಮಾನ್ಯಗೆ ವೈಟ್‌ಲಿಫ್ಟಿಂಗ್‌ನಲ್ಲಿ ಚಿನ್ನದ ಪದಕ

ಕಾರ್ಕಳ: ಎಸ್.ವಿ.ಟಿ. ಪ್ರೌಢಶಾಲಾ ವಿದ್ಯಾರ್ಥಿನಿ ಮಾನ್ಯಗೆ ವೈಟ್‌ಲಿಫ್ಟಿಂಗ್‌ನಲ್ಲಿ ಚಿನ್ನದ ಪದಕ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ-2026ರ ವೈಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎಸ್.ವಿ.ಟಿ. ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿ ವಿದ್ಯಾರ್ಥಿನಿ ಕು. ಮಾನ್ಯ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಮಾನ್ಯ ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹಶಿಕ್ಷಕರು, ಅಧ್ಯಾಪಕರು, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಇವರು ನಕ್ರೆ ಜ್ಯೋತಿ ನಗರದ ಶ್ರೀಮತಿ ಪೂರ್ಣಿಮಾ ಮತ್ತು ಶ್ರೀ ಜಯರಾಮ ಆಚಾರ್ಯ ದಂಪತಿಯ ಪುತ್ರಿ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments