Saturday, November 21, 2026
Google search engine
Homeಕಾರ್ಕಳನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 'ಇಂಟಲಿಜೆಂಟ್ ಎಲೆಕ್ಟ್ರಾನಿಕ್ಸ್, ಅಂಡರ್-ವಾಟರ್ ಕಮ್ಯೂನಿಕೇಶನ್ ಮತ್ತು ರೋಬೋಟಿಕ್ ಸಿಸ್ಟಮ್ಸ್' ಕುರಿತ...

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ‘ಇಂಟಲಿಜೆಂಟ್ ಎಲೆಕ್ಟ್ರಾನಿಕ್ಸ್, ಅಂಡರ್-ವಾಟರ್ ಕಮ್ಯೂನಿಕೇಶನ್ ಮತ್ತು ರೋಬೋಟಿಕ್ ಸಿಸ್ಟಮ್ಸ್’ ಕುರಿತ ಅಂತರರಾಷ್ಟ್ರೀಯ ಸಮ್ಮೇಳನ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ (ಅಡ್ವಾನ್ಸ್ಡ್ ಕಮ್ಯುನಿಕೇಶನ್ ಟೆಕ್ನಾಲಜಿ) ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 19 ಹಾಗೂ 20 ರಂದು ಹಮ್ಮಿಕೊಳ್ಳಲಾದ ‘ಇಂಟಲಿಜೆಂಟ್ ಎಲೆಕ್ಟ್ರಾನಿಕ್ಸ್, ಅಂಡರ್‌ವಾಟರ್ ಕಮ್ಯುನಿಕೇಶನ್ ಆ್ಯಂಡ್ ರೋಬೋಟಿಕ್ ಸಿಸ್ಟಮ್ಸ್’ (ICIEURS 2026) ವಿಷಯದ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಮಣಿಪಾಲದ ಕಾರ್ಮಿಕ್ ಡಿಸೈನ್ ಪ್ರೈವೇಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ನಿರ್ದೇಶಕ ರತ್ನಾಕರ್ ಭಟ್ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರತ್ನಾಕರ್ ಭಟ್ ಅವರು ‘ತಂತ್ರಜ್ಞಾನ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ, ಇಂಟಲಿಜೆಂಟ್ ಎಲೆಕ್ಟ್ರಾನಿಕ್ಸ್ ಮತ್ತು ರೋಬೋಟಿಕ್ಸ್‌ಗಳ ಬೆಳವಣಿಗೆಯು ಹೊಸ ಸಾಧ್ಯತೆಗಳಿಗೆ ದಾರಿ ಮಾಡಿಕೊಡುತ್ತಿದೆ. ವಿದ್ಯಾರ್ಥಿಗಳು ಕೇವಲ ತಾಂತ್ರಿಕ ಜ್ಞಾನಕ್ಕೆ ಸೀಮಿತವಾಗದೆ, ನೈಜ ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಾವೀನ್ಯಪೂರ್ಣ ಚಿಂತನೆ ಮತ್ತು ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು’ ಎಂದರು.

ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶಕ ಡಾ. ಪ್ರವೀಣ್ ಕುಮಾರ್ ಶೆಟ್ಟಿ ಮಾತನಾಡಿ ‘ಸಂಶೋಧನೆ ಮತ್ತು ನಾವೀನ್ಯತೆಗಳು ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಮುಖ ಆದ್ಯತೆಯಾಗಬೇಕು. ಇಂತಹ ಅಂತರರಾಷ್ಟ್ರೀಯ ಸಮ್ಮೇಳನಗಳು ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು, ಜಾಗತಿಕ ತಜ್ಞರೊಂದಿಗೆ ಸಂವಾದ ನಡೆಸಲು ಹಾಗೂ ಹೊಸ ಸಂಶೋಧನಾ ಸಹಯೋಗಗಳನ್ನು ರೂಪಿಸಿಕೊಳ್ಳಲು ಉತ್ತಮ ವೇದಿಕೆಯಾಗಿವೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಆಫ್-ಕ್ಯಾಂಪಸ್ ಕೇಂದ್ರದ ನಿರ್ವಹಣೆ ಹಾಗೂ ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ. ಎ. ಯೋಗೀಶ್ ಹೆಗ್ಡೆ ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ‘ಅಂತರಶಿಸ್ತೀಯ ಸಂಶೋಧನೆ ಮತ್ತು ತಂತ್ರಜ್ಞಾನಗಳ ಸಮನ್ವಯವು ಭವಿಷ್ಯದ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳು ಮತ್ತು ಸಂಶೋಧಕರು ಇಂತಹ ಸಮ್ಮೇಳನಗಳ ಮೂಲಕ ಜ್ಞಾನವನ್ನು ವಿಸ್ತರಿಸಿಕೊಂಡು, ಸಮಾಜಕ್ಕೆ ಉಪಯುಕ್ತವಾದ ತಾಂತ್ರಿಕ ಆವಿಷ್ಕಾರಗಳತ್ತ ಗಮನಹರಿಸಬೇಕು’ ಎಂದರು.

ಇದೇ ಸಂದರ್ಭದಲ್ಲಿ ಕಾನ್ಫರೆನ್ಸ್ ನ ಕೊಂಪೆನ್ಡಿಯಂ ಬಿಡುಗಡೆಗೊಳಿಸಲಾಯಿತು.
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ವೀಣಾದೇವಿ ಶಾಸ್ತ್ರಿಮಠ ವಿ. ಸ್ವಾಗತಿಸಿದರು. ಸಮ್ಮೇಳನದ ಕಾರ್ಯದರ್ಶಿ ಚಂದ್ರ ಸಿಂಗ್ ಅವರು ಸಮ್ಮೇಳನದ ಉದ್ದೇಶ, ಮಹತ್ವ ಹಾಗೂ ವಿವಿಧ ತಾಂತ್ರಿಕ ಗೋಷ್ಠಿಗಳು ಮತ್ತು ಕಾರ್ಯಕ್ರಮಗಳ ವೇಳಾಪಟ್ಟಿಯ ಕುರಿತು ಮಾಹಿತಿ ನೀಡಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ (ಅಡ್ವಾನ್ಸ್ಡ್ ಕಮ್ಯುನಿಕೇಶನ್ ಟೆಕ್ನಾಲಜಿ) ವಿಭಾಗದ ಮುಖ್ಯಸ್ಥ ಡಾ. ದುರ್ಗಾಪ್ರಸಾದ್ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಸಮ್ಮೇಳನದ ಕಾರ್ಯದರ್ಶಿ ಡಾ. ಕೆ.ಎಸ್. ಶಿವಪ್ರಕಾಶ್ ವಂದಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಅನುಷಾ ಆರ್ ಶರತ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments