Saturday, November 21, 2026
Google search engine
Homeರಾಜ್ಯರಸ್ತೆ ಅಪಘಾತ-ಹೋಟೆಲ್ ಉದ್ಯಮಿ ಸಾವು

ರಸ್ತೆ ಅಪಘಾತ-ಹೋಟೆಲ್ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕೋಟ ಪಡುಕೆರೆ ಮೂಲದ ಹೋಟೆಲ್ ಉದ್ಯಮಿ ವಿಶ್ವನಾಥ್ ಎಚ್. (55) ಮೃತಪಟ್ಟಿದ್ದಾರೆ.

ಮೃತ ವಿಶ್ವನಾಥ್ ಅವರು ಕೋಟದ ಮಣೂರು-ಪಡುಕೆರೆಯ ಜಟ್ಟಿಗೇಶ್ವರ ದೈವಸ್ಥಾನದ ಸಮೀಪದ ನಿವಾಸಿಯಾಗಿದ್ದರು. ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಇವರು, ಇತ್ತೀಚೆಗೆ ಬಿಡದಿಯಲ್ಲಿ ‘ಕರಾವಳಿ ಕಿಚನ್’ ಹೆಸರಿನ ಹೋಟೆಲ್ ನಡೆಸುತ್ತಿದ್ದರು.

ಗುರುವಾರ ರಾತ್ರಿ ಹೋಟೆಲ್ ವಹಿವಾಟು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಇವರು ಚಲಾಯಿಸುತ್ತಿದ್ದ ಬೈಕ್‌ಗೆ ಮತ್ತೊಂದು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವಿಶ್ವನಾಥ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments