Sunday, November 22, 2026
Google search engine
Homeಕಾರ್ಕಳಹೆಬ್ರಿಯ ಪಿ.ಆರ್.ಎನ್. ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶ್ರೀ ಶಂಕರ ವಿಜಯೋತ್ಸವದ ಸಂಭ್ರಮ

ಹೆಬ್ರಿಯ ಪಿ.ಆರ್.ಎನ್. ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶ್ರೀ ಶಂಕರ ವಿಜಯೋತ್ಸವದ ಸಂಭ್ರಮ

ಶ್ರೀ ಶಂಕರ ವಿಜಯೋತ್ಸವದ ಅಂಗವಾಗಿ ಹೆಬ್ರಿ ತಾಲೂಕು ಮಟ್ಟದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಹೆಬ್ರಿಯ ಪಿ.ಆರ್.ಎನ್. ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದೊಂದಿಗೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅಮೃತಭಾರತಿ ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ ಉದ್ಘಾಟಿಸಿ ಮಾತನಾಡಿ, ನಮ್ಮ ಸನಾತನ ಸಂಸ್ಕೃತಿಯ ರಕ್ಷಣೆಯಲ್ಲಿ ಶ್ರೀ ಶಂಕರಾಚಾರ್ಯರ ಕೊಡುಗೆ ಅಪಾರವಾಗಿದೆ. ಆದ್ದರಿಂದ ಅವರ ತತ್ವಚಿಂತನೆಗಳು ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಅತಿಥಿಯಾಗಿ ಮಾತನಾಡಿದ ಶ್ರೀಧರ ಹೆಬ್ಬಾರ್, ಜೀವನದಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ. ಶಂಕರಾಚಾರ್ಯರ ಅದ್ವೈತ ಸಿದ್ಧಾಂತದಿಂದ ಲೌಕಿಕ ಹಾಗೂ ಅಲೌಕಿಕ ಸುಖವನ್ನು ಪಡೆಯಲು ಸಾಧ್ಯ ಎಂದು ತಿಳಿಸಿದರು.

ಸಮಾರಂಭದಲ್ಲಿ ಸೀತಾರಾಮ ಹೆಬ್ಬಾರ್ ಹಾಗೂ ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಉಪಸ್ಥಿತರಿದ್ದರು. ಸ್ಪರ್ಧಾ ಸಂಚಾಲಕಿ ಸುನೀತಾ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಸೌಪರ್ಣಿಕಾ ಜೋಶಿ ಹಾಗೂ ಐಶ್ವರ್ಯಲಕ್ಷ್ಮಿ ಸಹಕರಿಸಿದರು.

ಹೆಬ್ರಿ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಭಾಷಣ, ಸ್ತೋತ್ರ ಗಾಯನ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು, ವಿಜೇತರು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments