ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವತಿಯಿಂದ ಆಯೋಜಿಸಲಾದ ಮೈಸೂರು ವಿಭಾಗೀಯ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಚಿತ್ರಕಲೆ ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್. ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪರೀಕ್ಷಿತ್ ಆಚಾರ್ಯ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.














