ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಭಾರತ ಚುನಾವಣಾ ಆಯೋಗದ ವತಿಯಿಂದ ಎಲೆಕ್ಟೋರಲ್ ಲಿಟರಸಿ ಕ್ಲಬ್‌ಗಳ ಮೂಲಕ ಆಯೋಜಿಸಲಾಗಿದ್ದ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಪ್ರಬಂಧ ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಸುವರ್ಣ ಕೆ. ಶೆಟ್ಟಿ ಪ್ರಥಮ ಬಹುಮಾನ ಹಾಗೂ ಸ್ವರ್ಣಿಕಾ ಎಸ್. ಶೆಟ್ಟಿ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಇಬ್ಬರೂ ವಿದ್ಯಾರ್ಥಿನಿಯರು ಉಡುಪಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.














