ಶ್ರೀ ಶಂಕರವಿಜಯೋತ್ಸವ – 2026, ಶೃಂಗೇರಿ ಇವರ ವತಿಯಿಂದ ಆಯೋಜಿಸಲಾದ ಶಂಕರಾಚಾರ್ಯರ ಜೀವನದ ಘಟನಾವಳಿಗಳ ಕುರಿತ ಹೆಬ್ರಿ ತಾಲೂಕು ಮಟ್ಟದ ಕಿರಿಯರ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್. ಪಬ್ಲಿಕ್ ಸ್ಕೂಲಿನ 7ನೇ ತರಗತಿ ವಿದ್ಯಾರ್ಥಿನಿ ಸಿಯಾ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.














