ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಹೆಬ್ರಿ ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಅಜಯ್ ಕುಮಾರ್ ಮತ್ತು ಭುವನ್ ಪ್ರಸಾದ್ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳು ಸಿದ್ಧಪಡಿಸಿದ ಸ್ವಯಂಚಾಲಿತ ಅಡಿಕೆ ಕೊಯ್ಯುವ ಯಂತ್ರದ ಮಾದರಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದೆ.
ವಿದ್ಯಾರ್ಥಿಗಳ ಸಾಧನೆಗೆ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.














