ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾಸಂಸ್ಥಾನ್‌ಗೆ ಸಂಬಂಧಿಸಿದ ರಾಷ್ಟ್ರಮಟ್ಟದ ಗಣಿತ ಮೇಳವು ಇತ್ತೀಚೆಗೆ ಜಾರ್ಖಂಡ್‌ನಲ್ಲಿ ನಡೆಯಿತು. ಈ ಮೇಳದ ಗಣಿತ ಮಾದರಿ ನವಚಾರಿತ ಪ್ರದರ್ಶನದಲ್ಲಿ ಹೆಬ್ರಿ ಪಿ.ಆರ್.ಎನ್. ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಮನಸ್ವಿ ಉಡುಪ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಅವರು ಪುಷ್ಪ ನೀಡಿ, ಸಿಹಿ ತಿನಿಸುವ ಮೂಲಕ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶಕುಂತಲಾ, ತರಬೇತಿ ನೀಡಿದ ಶಿಕ್ಷಕಿ ಪ್ರಜಾತಾ, ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ, ಪೋಷಕರಾದ ಲೀಲಾವತಿ ಉಡುಪ ಮತ್ತು ರಾಮಚಂದ್ರ ಉಡುಪ, ಗುರು ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಸಾಧಕಿ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.















