ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಕಾರ್ಕಳ ಮತ್ತು ಸಮೂಹ ಸಂಪನ್ಮೂಲ ಕೇಂದ್ರ, ಹೆಬ್ರಿ ಇವರ ಸಹಯೋಗದಲ್ಲಿ ನಡೆದ ಹೆಬ್ರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಕಾಲೇಜಿನ ಆರು ವಿದ್ಯಾರ್ಥಿಗಳು ಕಾರ್ಕಳ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಲಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು:
– ಭರತನಾಟ್ಯ – ಸೌಂದರ್ಯ – ಪ್ರಥಮ ಸ್ಥಾನ
– ಜನಪದ ಗೀತೆ – ರಕ್ಷಿತಾ – ಪ್ರಥಮ ಸ್ಥಾನ
– ಸಂಸ್ಕೃತ ಭಾಷಣ – ಪ್ರಣಮ್ಯ – ಪ್ರಥಮ ಸ್ಥಾನ
– ಆಶುಭಾಷಣ – ಸಾನ್ವಿ – ಪ್ರಥಮ ಸ್ಥಾನ
– ಕನ್ನಡ ಪ್ರಬಂಧ – ವೈಷ್ಣವಿ – ಪ್ರಥಮ ಸ್ಥಾನ
– ಮಿಮಿಕ್ರಿ – ಸುಮಂತ್ – ಪ್ರಥಮ ಸ್ಥಾನ
ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ಆರು ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.














