ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಿತಿಯ ಬಾಲಕರ ವಿಭಾಗ ಹಾಗೂ ಬಾಲಕಿಯರ ವಿಭಾಗಗಳ ಕರಾಟೆ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ಸುದೀಕ್ಷಾ ಪೂಜಾರಿ ಬೆಳ್ಳಿಯ ಪದಕ ಹಾಗೂ ಎಂಟನೇ ತರಗತಿಯ ಅಕ್ಷಯ್ ಪ್ರಭು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.














