
ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಪ್ರತಿಮೆ ನಿರ್ಮಿಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಲ್ಪಿ ಕೃಷ್ಣಾನಾಯ್ಕ್ ಅವರನ್ನು ಪುದುಚೇರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣನಾಯ್ಕ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನವೆಂಬರ್ 7ರ ಗುರುವಾರದಂದು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.ಇದರ ಹಿನ್ನೆಲೆಯಲ್ಲಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಮಾಹೆಯಲ್ಲಿ ತಲೆಮರೆಸಿಕೊಂಡಿದ್ದ ಕೃಷ್ಣಾ ನಾಯ್ಕ್ ನನ್ನು ಕಾರ್ಕಳ ಟೌನ್ ಪೊಲೀಸ್ ಠಾಣೆಯ ಪಿಎಸ್ ಐ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.
ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಕಂಪನಿಯ ಮೂಲಕ ಕೃಷ್ಣಾನಾಯ್ಕ್ ಅವರು ಉಡುಪಿ ನಿರ್ಮಿತಿ ಕೇಂದ್ರದಿಂದ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪಿಸಲು 1.25 ಕೋಟಿ ರೂ.ಗಳನ್ನು ಸ್ವೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಬದಲಿಗೆ ನಕಲಿ ಪ್ರತಿಮೆ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್‌ನಲ್ಲಿ ದೂರು ನೀಡಿದ್ದು, ಕಾರ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












