ಕಾರ್ಕಳ:ಡಿ. ಆ‌ರ್. ರಾಜು ನಿಧನ

0

ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್‌ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ಉದ್ಯಮಿ ಡಿ. ಆ‌ರ್. ರಾಜು ಪೂಜಾರಿ (64) ಹೃದಯಾಘಾತಕ್ಕೆ ಒಳಗಾಗಿ ನಿನ್ನೆ (ನ.18) ರಾತ್ರಿ ನಿಧನರಾಗಿದ್ದಾರೆ.

ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲ್ಲೆಯಲ್ಲಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆ ತಲುಪುವ ವೇಳೆಗಾಗಲೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರೆನ್ನಲಾಗಿದೆ.

ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು ನಿನ್ನೆ ಬೆಳಿಗ್ಗೆಯಿಂದಲೇ ಅವರು ಹಲವಾರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಅವರ ನಿಧನಕ್ಕೆ ಎಂ.ಎಲ್.ಸಿ ಮಂಜುನಾಥ್ ಭಂಡಾರಿ,ಮಾಜಿ ಸಚಿವ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್,ಮುನಿಯಾಲು ಉದಯ್ ಕುಮಾರ್ ಶೆಟ್ಟಿ ರಾಜ್ಯ ಕ್ರಷರ್ಸ್ ಅಸೋಸಿಯೇಷನ್ಸ್ ಅಧ್ಯಕ್ಷ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಸೇರಿದಂತೆ ಹಲವು ಗಣ್ಯರು ಸಂತಾಪ ಸಲ್ಲಿಸಿದ್ದಾರೆ.

ಡಿ.ಆರ್ ರಾಜು ಅವರ ಅಂತಿಮ ಕ್ರಿಯೆಯು ಇಂದು ಬೆಳಿಗ್ಗೆ 11.30 ಗಂಟೆಗೆ ಅವರ ಸ್ವಗೃಹದಲ್ಲಿ ನಡೆಯಲಿದೆ.

   

LEAVE A REPLY

Please enter your comment!
Please enter your name here