ಕಾರ್ಕಳ ಗ್ರಾಮ ಪಂಚಾಯತ್ ಮರು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ:ನವೀನ್ ನಾಯಕ್
ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇರೆ ಬೇರೆ ಗ್ರಾಮ ಪಂಚಾಯತ್‌ಗಳಲ್ಲಿ 07 ಸ್ಥಾನಗಳಿಗೆ ನಡೆದ ಮರು ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಐದು ಬೆಂಬಲಿತ ಅಭ್ಯರ್ಥಿಗಳು ಜಯಭೇರಿಗಳಿಸಿದ್ದು, ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಹರ್ಷ ವ್ಯಕ್ತಪಡಿಸುತ್ತದೆ.
ಗ್ರಾಮ ಪಂಚಾಯತಿಗಳ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆ ಭಾಗದ ಮತದಾರರು ಭಾರತೀಯ ಜನತಾ ಪಾರ್ಟಿಯ ಮೇಲೆ ನಂಬಿಕೆ ಇಟ್ಟು ಮತದಾನ ಮಾಡಿ ಬೆಂಬಲಿಸಿದ್ದಾರೆ. ಜನರಿಗೆ ಬಿಜೆಪಿಯೇ ಭರವಸೆ ಎಂಬುವುದು ಖಾತ್ರಿಯಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಹಾಗೂ ಕಾರ್ಕಳದಲ್ಲಿ ಕಾಂಗ್ರೆಸ್ ನಾಯಕರ ದಬ್ಬಾಳಿಕೆಗೆ ಕ್ಷೇತ್ರದ ಜನ ತಕ್ಕ ಉತ್ತರ ನೀಡಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮಾನ್ಯ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರ ನಿರಂತರ ಜನಸಂಪರ್ಕ, ಅವರು ಕ್ಷೇತ್ರದಲ್ಲಿ ಮಾಡಿರುವಂತಹ ನಿರಂತರ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರಣ. ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳಿಗೆ ಮತದಾನ ನೀಡಿ ಗೆಲ್ಲಿಸಿದ ಕ್ಷೇತ್ರದ ಮತದಾರರಿಗೆ ಅಭ್ಯರ್ಥಿಗಳ ಗೆಲುವಿಗೆ ಹಗಲಿರಲು ದುಡಿದ ಕಾರ್ಯಕರ್ತರಿಗೆ, ಪಕ್ಷದ ಹಿರಿಯರಿಗೆ, ಬಿಜೆಪಿ ಕ್ಷೇತ್ರಾಧ್ಯಕ್ಷನಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತಾ ವಿಜಯೀಯಾದ ಅಭ್ಯರ್ಥಿಗಳಿಗೆ ಕಾರ್ಕಳ ಬಿಜೆಪಿ ಮಂಡಾಳ ಅಧ್ಯಕ್ಷ ನವೀನ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ..