ವಿಟಿಯು ಅಂತರ ಕಾಲೇಜು ಮಂಗಳೂರು ವಿಭಾಗ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿಟ್ಟೆ ತಂಡ ಚಾಂಪಿಯನ್
ಕಾರ್ಕಳ: ನಿಟ್ಟೆಯ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿನಡೆದ ವಿಟಿಯು ಅಂತರ ಕಾಲೇಜು ಮಂಗಳೂರು ವಿಭಾಗ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪುರುಷರ ಕ್ರಿಕೆಟ್ ತಂಡವು ಚಾಂಪಿಯನ್ ಶಿಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಮಂಗಳೂರು ವಿಭಾಗದ ವಿಟಿಯು ಸಂಯೋಜಿತ ಕಾಲೇಜುಗಳಿಂದ ಒಟ್ಟು 18 ತಂಡಗಳು ಭಾಗವಹಿಸಿದ್ದವು.
ಫೈನಲ್ ನಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಕ್ರಿಕೆಟ್ ತಂಡವು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ತಂಡವನ್ನು 4 ರನ್ ಗಳಿಂದ ಸೋಲಿಸಿತು. ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ ಮೆಂಟ್ ರನ್ನರ್ ಅಪ್ ಸ್ಥಾನ ಪಡೆದರೆ, ಮೂಡುಬಿದಿರೆಯ ಎಂಐಟಿಇ ಮತ್ತು ಭಟ್ಕಳದ ಎಐಟಿಎಂ ಕ್ರಮವಾಗಿ 3 ಮತ್ತು 4ನೇ ಸ್ಥಾನಗಳನ್ನು ಪಡೆದುಕೊಂಡಿವೆ.