ಕಾಂಗ್ರೆಸ್ ಬೂತ್ ಅದ್ಯಕ್ಷರುಗಳಿಗೆ ಅಭಿನಂದನೆ ಮತ್ತು ಕಾರ್ಯಾಗಾರ
ಕಾರ್ಕಳ ಬ್ಲಾಕ್ ವ್ಯಾಪಿಯ ನೂತನ ಬೂತ್ ಅದ್ಯಕ್ಷರುಗಳಿಗೆ ಅಭಿನಂದನೆ ಮತ್ತು ಕಾರ್ಯಗಾರ ಅದಿತ್ಯವಾರ ಸಂಜೆ ಪ್ರಕಾಶ್ ಹೋಟೇಲ್ ನಲ್ಲಿ ಜರುಗಿತು.
ಕಾರ್ಕಳ ಬ್ಲಾಕ್ ನೂತನ 150 ಬೂತ್ ಅದ್ಯಕ್ಷರುಗಳನ್ನು ಅಭಿನಂದಿಸಿ ಉದಯ್ ಶೆಟ್ಟಿ ಮಾತನಾಡಿ ಪಕ್ಷದ ಸಂಘಟನೆಯಲ್ಲಿ ಬೂತ್ ಅದ್ಯಕ್ಷರ ಪಾತ್ರ ಅತೀ ಪ್ರಮುಖವಾದದ್ದು, ಬೂತ್ ಅದ್ಯಕ್ಷರು ಸ್ಥಳಿಯ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಸೇವೆ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಸುಲಭ ಹಾಗೂ ಅದರ ಪರಿಣಾಮ ಪಕ್ಷ ಸಂಘಟನೆಗೆ ಪೂರಕವಾಗುತ್ತದೆ ಎಂದರು.
ಅದ್ಯಕ್ಷತೆ ವಹಿಸಿದ್ದ ಬ್ಲಾಕ್ ಅದ್ಯಕ್ಷ ಶುಭದರಾವ್ ಮಾತನಾಡಿ ಈ ದೇಶದ ಇತಿಹಾಸ ಮತ್ತು ಕಾಂಗ್ರೆಸ್ ಇತಿಹಾಸ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಅಂತಹ ಪಕ್ಷದ ಪದಾಧಿಕಾರಿಗಳಾಗಿರುವುದು ನಮ್ಮೆಲ್ಲರ ಪುಣ್ಯ, ಸಿಕ್ಕಿದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡು ಪಕ್ಷದ ಬಲವರ್ಧನೆಗೆ ಸಂಪೂರ್ಣ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಹಿರಿಯ ನ್ಯಾಯವಾದಿ ಶೇಖರ್ ಮಡಿವಾಳ್ ಮಾತನಾಡಿ ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನಾ ಕಾರ್ಯಾವು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವುದು ಸಂತಸ ತಂದಿದೆ, ಪಕ್ಷ ಸಂಘಟನೆಯಲ್ಲಿ ಯುವ ಕಾಂಗ್ರೆಸ್ ಪಾತ್ರ ಅತ್ಯಂತ ಮಹತ್ವದ್ದು ಹಾಗಾಗಿ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳು ಈ ಅಂಶವನ್ನು ಅರಿತುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ನಾಯಕರಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯುಳ್ಳ ಸಮವಸ್ತ್ರವನ್ನು ಬಿಡುಗಡೆಗೊಳಿಸಿ ಬೂತ್ ಅದ್ಯಕ್ಷರಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ನೂತನ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಲಿಕ್ ಅತ್ತೂರು, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಾಜೇಂದ್ರ ದೇವಾಡಿಗ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ರೀನಾ ಡಿಸೋಜ, ಹಿಂದುಳಿದ ಘಟಕದ ಅದ್ಯಕ್ಷ ಅನಿಲ್ ನೆಲ್ಲಿಗುಡ್ಡೆ, ಅಲ್ಪಸಂಖ್ಯಾತ ಘಟಕದ ಅದ್ಯಕ್ಷ ಶಬ್ಬೀರ್, ಕಾನೂನು ಘಟಕದ ಅದ್ಯಕ್ಷ ರೆಹಮ್ಮತ್ತುಲ್ಲಾ ಉಪಸ್ಥಿತರಿದ್ದರು.
ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ ವಂದನಾರ್ಪಣೆಗೈದರು, ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.