ಕಾರ್ಕಳಕ್ಕೆ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ
ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೂತನ ಬ್ಲಾಕ್ ಅದ್ಯಕ್ಷರು ಮತ್ತು ವಿವಿಧ ಘಟಕದ ನೂತನ ಪಧಾದಿಕಾರಿಗಳ ಪದಗ್ರಹಣ, ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ ವೀರಪ್ಪ ಮೊಯಿಲಿಯವರಿಗೆ ಅಭಿನಂದನೆ, ಸಹಾಯ ಧನ ವಿತರಣೆ,ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಒಳಗೊಂಡ ಕಾಂಗ್ರೇಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯ ಉಪ ಮುಖ್ಯಮಂತ್ರಿ, ಕೆ.ಪಿ.ಸಿ.ಸಿ. ರಾಜ್ಯಾದ್ಯಕ್ಷರಾದ ಡಿ.ಕೆ. ಶಿವಕುಮಾರವರು ಭಾಗವಹಿಸಲಿರುವುದರಿಂದ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆಯು ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆಯಿತು.
ಡಿ.ಕೆ.ಶಿವಕುಮಾರವರು ನಮ್ಮೂರಿಗೆ ಆಗಮಿಸುತ್ತಿರುವುದು ಸಂತಸದ ಸುದ್ದಿ, ಅವರ ಬೇಟಿಯಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಲಿದೆ, ಪ್ರತೀ ಬೂತಿನಿಂದ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಮನವಿ ಮಾಡಿದರು.
ಕಾರ್ಕಳ ಬ್ಲಾಕ್ ಅಧ್ಯಕ್ಷರಾದ ಶುಭದ ರಾವ್ ಮಾತನಾಡಿ ಬ್ಲಾಕ್ ಮಟ್ಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅದ್ಯಕ್ಷರೇ ಭಾಗವಹಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ ಇದು ಕಾರ್ಯಕರ್ತರ ಉತ್ಸವದ ಕಾರ್ಯಕ್ರಮವಾಗಿದೆ ಹಾಗಾಗಿ ಕಾರ್ಯಕ್ರಮದ ಯಶಸ್ವಿಯಲ್ಲಿ ಕಾರ್ಕಳ ಕಾಂಗ್ರೆಸ್ ಪ್ರತಿಯೊಬ್ಬ ಸದಸ್ಯನ ಪಾತ್ರವು ಅವಶ್ಯವಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮಾತನಾಡಿ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಪಾಲ್ಗೊಳ್ಳಲಿರುವ ಕಾರ್ಕಳ ಕಾಂಗ್ರೆಸ್ ಕುಟುಂಬಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸಂಪೂರ್ಣ ಬೆಂಬಲ ಹಾಗೂ ಸಹಕಾರವಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರ ಪಾಲ್, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪಿನಾಥ ಭಟ್, ಹಿರಿಯ ಕಾಂಗ್ರೆಸ್ ನಾಯಕರಾದ ಮಂಜುನಾಥ ಪೂಜಾರಿ ಮುದ್ರಾಡಿ ಸಂದರ್ಬೋಚಿತವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಿರಿಯಣ್ಣ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ನಗರ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಂದ್ರ ದೇವಾಡಿಗ, ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಂಕರ್, ಜಿಲ್ಲಾ ಉಪಾದ್ಯಕ್ಷರಾದ ಸುಧಾಕರ ಕೋಟ್ಯಾನ್, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಲಿಕ್ ಅತ್ತೂರು, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ರೀನಾ ಡಿಸೋಜ, ಕಾರ್ಕಳ ಬ್ಲಾಕ್ ಉಪಾದ್ಯಕ್ಷರಾದ ಜಾರ್ಜ್ ಕ್ಯಾಸ್ಟಲಿನೋ, ಇಂಟಕ್ ಜಿಲ್ಲಾಧ್ಯಕ್ಷರಾದ ಕಿರಣ್ ಹೆಗ್ಡೆ ಹಾಗೂ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರುಗಳು ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರುಗಳು, ಚುನಾಯಿತ ಜನಪ್ರತಿನಿಧಿಗಳು, ಪುರಸಭಾ ಸದಸ್ಯರು ಉಪಸ್ಥಿತರಿದ್ದರು. ಬ್ಲಾಕ್ ವಕ್ತಾರರಾದ ಪ್ರದೀಪ್ ಬೇಲಾಡಿ ನಿರೂಪಿಸಿದರು, ಅಲ್ಪಸಂಖ್ಯಾತ ಘಟಕದ ಅದ್ಯಕ್ಷ ಶಬ್ಬೀರ್ ಮಿಯಾರು ಸ್ವಾಗತಿಸಿದರು, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ಧನ್ಯವಾದವಿತ್ತರು.