ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಿಜ್ಞಾನ ಸಂಘದ ಕಾರ್ಯಕ್ರಮ
ಕಾರ್ಕಳ:ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಿಜ್ಞಾನ ಸಂಘ ಮತ್ತು ನೇಚರ್ ಕ್ಲಬ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಗೋವ ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಕಾಲೇಜಿನ ಪೂರ್ವ ವಿದ್ಯಾರ್ಥಿಯೂ ಆದ ಪ್ರೊ.ಕೃಷ್ಣಾನಂದ ಪೈ ಅವರು ಭೂಮಂಡಲದ ಧ್ರುವ ಪ್ರದೇಶಗಳ ವಿಶೇಷತೆಗಳು ಹಾಗೂ ಭೂಮಿಯ ಸಮತೋಲನವನ್ನು ಕಾಪಾಡುವಲ್ಲಿ ಧ್ರುವ ಪ್ರದೇಶಗಳ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಾಚಾರ್ಯರಾದ ಡಾ. ಮಂಜುನಾಥ ಎ. ಕೋಟ್ಯಾನ್ ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ದತ್ತಾತ್ರೇಯ ಮಾರ್ಪಳ್ಳಿ ಉಪಸ್ಥಿತರಿದ್ದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವಿಜಯಕುಮಾರಿ ಸ್ವಾಗತಿಸಿ, ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಈಶ್ವರ ಭಟ್ ವಂದಿಸಿದರು.ವಿದ್ಯಾರ್ಥಿನಿ ಕು.ನೇಹಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.