ಹೊಸದಿಲ್ಲಿ, ಕರ್ನಾಟಕದಲ್ಲಿ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯುತ್ತಾರೆಯೇ ಅಥವಾ ಹೊಸಬರ ನೇಮಕ ಆಗಲಿದೆಯೇ ಎಂಬ ಪ್ರಶ್ನೆಗೆ ಇನ್ನೊಂದು ವಾರದಲ್ಲಿ ಉತ್ತರ ಸಿಗಲಿದೆ.
ಜತೆಗೆ ಬಿಜೆಪಿಯ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಅಧಿಕಾರಾವಧಿಯೂ ಮುಕ್ತಾಯ ಆಗಿರುವುದರಿಂದ ಏಪ್ರಿಲ್ ಅಂತ್ಯದೊಳಗೆ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ ಇದೆ.
ಇದಕ್ಕೆ ಮುನ್ನ ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.ಬಿಜೆಪಿಯ ವರಿಷ್ಠರು ಇನ್ನೊಂದು ವಾರದಲ್ಲಿ ಕರ್ನಾಟಕ,ಉ.ಪ್ರದೇಶ,ತ.ನಾಡು,ಪ.ಬಂಗಾಲ ರಾಜ್ಯಗಳ ಬಿಜೆಪಿ ಅಧ್ಯಕ್ಷರನ್ನು ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.