ನಿಟ್ಟೆ:ಬೈಕ್ ರಿಕ್ಷಾ ಡಿಕ್ಕಿ,ಹಲವರಿಗೆ ಗಾಯ
ನಿಟ್ಟೆ:ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಹಲವಾರು ಗಾಯಗೊಂಡ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಭ್ರಮರಿ ಬಳಿ ನಡೆದಿದೆ.
ರಿಕ್ಷಾ ಚಾಲಕ ಲೆಮಿನಾ ಕಡೆಯಿಂದ ಭ್ರಮರಿ ಕಡೆಗೆ ಚಲಾಯಿಸಿಕೊಂಡು ಬರುತ್ತಿರುವಾಗ ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಹೋಗುವ ಬೈಕ್ ಸವಾರ ಬೇರೊಂದು ವಾಹನವನ್ನು ಓವರ್ ಟೇಕ್ ಮಾಡಿ ಎದುರುಗಡೆ ಹೋಗುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ರಸ್ತೆಗೆ ಬಿದ್ದಿದ್ದು ಚಾಲಕ ಸೇರಿದಂತೆ ರಿಕ್ಷಾದಲ್ಲಿದ್ದ ನಾಲ್ವರೂ ಗಾಯಗೊಂಡಿದ್ದಾರೆ.ಬೈಕ್ ಸವಾರ ಕೂಡ ಗಾಯಗೊಂಡಿದ್ದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.