ಹೆಬ್ರಿ:ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಕಮೀಷನರ್ ಆಗಿ ಹೆಬ್ರಿಯ ಪ್ರಶಾಂತ್ ಕುಮಾರ್ ಶೆಟ್ಟಿ ಅವರಿಗೆ ಹುಟ್ಟೂರ ಅಭಿನಂದನೆ.
ಹೆಬ್ರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾಗಿ ಪದೋನ್ನತಿ ಹೊಂದಿ ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಕಮೀಷನರ್ ಆಗಿ ಹೆಬ್ರಿಯ ಪ್ರಶಾಂತ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕರಿಸಿದ್ದಾರೆ.
ಸಹಾಯಕ ಕಮೀಷನರ್ ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ರಜತಾದ್ರಿಯಲ್ಲಿರುವ ಧಾರ್ಮಿಕ ದತ್ತಿ ಇಲಾಖೆಯ ಕಚೇರಿಯಲ್ಲಿ ಹುಟ್ಟೂರಿನ ಪರವಾಗಿ ಹಿರಿಯರಾದ ಧಾರ್ಮಿಕ ಮುಂದಾಳು ಹೆಬ್ರಿ ಭಾಸ್ಕರ ಜೋಯಿಸ್ ಅಭಿನಂದಿಸಿದರು.
ಸಮಾಜ ಸೇವಕರಾದ ಬೈಕಾಡಿ ಮಂಜುನಾಥ ಭಟ್ ಶಿವಪುರ, ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್.ತಾರಾನಾಥ ಬಲ್ಲಾಳ್, ಸಮಾಜ ಸೇವಕರಾದ ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಪೂರ್ವಧ್ಯಕ್ಷ ನವೀನ್ ಕೆ ಅಡ್ಯಂತಾಯ, ಹೆಬ್ರಿ ಚೈತನ್ಯ ಯುವ ವೃಂದದ ಗೌರವಾಧ್ಯಕ್ಷರಾದ ಹೆಬ್ರಿ ಗ್ರಾಮ ಪಂಚಾಯತ್ ಸದಸ್ಯ ಎಚ್.ಜನಾರ್ಧನ್, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಹೆಬ್ರಿಯ ಶ್ರೀಮತಿ ವಿಜಯಾ, ಪತ್ರಕರ್ತರಾದ ಹೆಬ್ರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಕುಮಾರ್ ಮುನಿಯಾಲ್ ಸಹಾಯಕ ಕಮಿಷನರ್ ಹೆಬ್ರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸಿ ಗೌರವಿಸಿದರು.