ಕಾರ್ಕಳ ಬ್ಲಾಕ್ ಕಾರ್ಯಕಾರಿಣಿ ಸಮಿತಿಯ ಸಭೆ: ಪ್ರಮುಖ ವಿಚಾರಗಳ ಬಗ್ಗೆ ನಿರ್ಣಯ

0

ಕಾರ್ಕಳ ಬ್ಲಾಕ್ ಕಾರ್ಯಕಾರಿಣಿ ಸಮಿತಿಯ ಸಭೆ: ಪ್ರಮುಖ ವಿಚಾರಗಳ ಬಗ್ಗೆ ನಿರ್ಣಯ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆಯು ಬ್ಲಾಕ್ ಅಧ್ಯಕ್ಷರಾದ ಶುಭದ್ ರಾವ್ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಆರಂಭದಲ್ಲಿ ಪೆಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಜನ ಪ್ರವಾಸಿಗರ ಆತ್ಮಕ್ಕೆ ಹಾಗೂ ಅಗಲಿದ ಹಿರಿಯ ಕಾಂಗ್ರೆಸ್ ನಾಯಕರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯು ನಮ್ಮ ಮುಂದಿದ್ದು ಅದಕ್ಕಾಗಿ ಸರ್ವ ರೀತಿಯಲ್ಲೂ ನಾವು ಸನ್ನದ್ದರಾಗ ಬೇಕಾಗಿದೆ ಎಂದರು. ಕಾಂಗ್ರೆಸ್ ವಿರುದ್ದ ವಿರೋಧಿಗಳು ಸುಳ್ಳು ಸುದ್ದಿಗಳೊಂದಿಗೆ ಅಪಪ್ರಚಾರ ನಡೆಸುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕಾಗಿದೆ, ನಕಲಿ ಪ್ರತಿಮೆಯ ಭಗ್ನ ಅವಶೇಷಗಳಿಂದ ಅವಮಾನಕಾರಿ ರೀತಿಯಲ್ಲಿ ನಿಂತು ಕಾರ್ಕಳಕ್ಕೆ ಕಳಂಕದಂತಾಗಿರುವ ಬೈಲೂರು ಪರಶುರಾಮ ಥೀಮ್ ಪಾರ್ಕ್ ,ನ ಪರಶುರಾಮ ಪ್ರತಿಮೆಯ ಪುನರ್ ನಿರ್ಮಾಣಕ್ಕೆ ಹೋರಾಟದ ಅಗತ್ಯವಿದ್ದು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಮಾತನಾಡಿ ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸಮಸ್ಯೆಗಳ ಕುರಿತು ಪಕ್ಷದ ಗಮನಕ್ಕೆ ಬಂದಿದ್ದು ಆರೋಗ್ಯ ಸಚಿವರ ಗಮನಕ್ಕೆ ತರಲಾಗವುದು ಎಂದರು. ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾದ ವಿಚಾರಗಳನ್ನು ಸವಾಲಾಗಿ ಪರಿಗಣಿಸಿ ಪಕ್ಷದ ಎಲ್ಲಾ ಸ್ಥರಗಳ ಪ್ರಮುಖರು ಕಾರ್ಯೋನ್ಮುಖ ಆಗಬೇಕಿದೆ ಎಂದರು. ಹಾಗೂ ಎಂದರು. ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ಮಾತನಾಡಿ ಜಿಲ್ಲಾ ಗ್ಯಾರಂಟಿ ಸಮಿತಿಯ ನಿರ್ಣಯದಂತೆ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶವನ್ನು ನಡೆಸಲು ಯೋಜಿಸಲಾಗಿದೆ ಎಂದರು.

ಹೆಬ್ರಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾದ ಮಾಜಿ ಶಾಸಕರು ಕಾಂಗ್ರೆಸ್ ಪಕ್ಷದ ನಾಯಕರು ದಿವಂಗತ ಗೋಪಾಲ ಭಂಡಾರಿಯವರ ಪುತ್ತಳಿ ಸ್ಥಾಪನೆಯಲ್ಲಿ ಸಹಕಾರ ನೀಡುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ಸಮಸ್ಯೆ, ಪರಶುರಾಮ ಥೀಮ್ ಪಾರ್ಕ್ ಹೋರಾಟ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನುಭಾಸ್ಕರ್ ಪೂಜಾರಿ, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಕುಶ.ಆರ್. ಮೂಲ್ಯ, ಜಾರ್ಜ್ ಕ್ಯಾಸ್ತಲಿನೊ, ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ, ಯುವ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕ್ ಅತ್ತೂರು, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಜೂಲಿಯೆಟ್‌ ಡಿಸೋಜ, ಪುರಸಭಾ ಸದ್ಯರು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರುಗಳು, ಚುನಾಯಿತ ಜನ ಪ್ರತಿನಿಧಿಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಶಬೀರ್ ಅಹಮದ್ ಮಿಯಾರು ನಿರೂಪಿಸಿ ಗ್ಯಾರಂಟಿ ಸಮಿತಿಯ ‌ಸದಸ್ಯರಾದ ಹೇಮಂತ್ ಆಚಾರ್ಯ ವಂದನಾರ್ಪಣೆಯಿತ್ತರು.

   

LEAVE A REPLY

Please enter your comment!
Please enter your name here