ಬಿಜೆಪಿಯಲ್ಲಿ ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ-ಎಸ್.ಟಿ.ಸೋಮಶೇಖರ್

0

ಬಿಜೆಪಿಯಲ್ಲಿ ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ-ಎಸ್.ಟಿ.ಸೋಮಶೇಖರ್

ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ ಎಂದು ಯಶವಂತಪುರದ ಬಿಜೆಪಿಯ ಉಚ್ಚಾಟಿತ ಶಾಸಕ ಎಸ್‌ಟಿ ಸೋಮಶೇಖರ್ ಹೇಳಿದರು.

ಬಿಜೆಪಿಯ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಸ್‌ಟಿ ಸೋಮಶೇಖರ್ ಅವರು,ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು, ಒಳ್ಳೆಯದಾಯ್ತು ಎಂದರು.

1% ಸಹ ಬೇಸರ, ಅಸಮಾಧಾನ ಇಲ್ಲ. ಉಚ್ಚಾಟನೆ ಮಾಡಿದ್ದು ಖುಷಿ ಇದೆ. ಬಿಜೆಪಿಯಲ್ಲಿ ನನ್ನ ಪರವಾಗಿ ಮಾತನಾಡಲು ಯಾರಿಗೂ ಧೈರ್ಯ ಇಲ್ಲ. ಬಿಜೆಪಿಯಲ್ಲಿ ಮಾಡಬಾರದ್ದನ್ನ ಮಾಡಿರೋರು ಯರ‍್ಯಾರೋ ಇದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ ಎಂದು ಹೇಳಿದರು.

ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು.

   

LEAVE A REPLY

Please enter your comment!
Please enter your name here