ಮೇ.30:ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರತಿಭಾ ಪುರಸ್ಕಾರ:ರೂ.1 ಕೋಟಿ 5 ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ವಿ.ವಿ.ಕುಲಪತಿ ಪ್ರೊ.ಪಿ.ಎಲ್.ಧರ್ಮ ಭಾಗಿ ಶಾಸಕರಾದ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ

0
default

ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪ್ರತಿಭಾ ಪುರಸ್ಕಾರ:ರೂ.1 ಕೋಟಿ 5 ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ

ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ವಿ.ವಿ.ಕುಲಪತಿ ಪ್ರೊ.ಪಿ.ಎಲ್.ಧರ್ಮ ಭಾಗಿ ಶಾಸಕರಾದ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ

ಗಣಿತ ನಗರ : ಕಾರ್ಕಳ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವವು 30.05.2025ರ ಶುಕ್ರವಾರದಂದು ಜರುಗಲಿದ್ದು, ಆ ದಿನ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ 2025ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಳಿಗೆ ರೂ. 64 ಲಕ್ಷದ 22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.18 ಲಕ್ಷದ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆ ರೂ. 14 ಲಕ್ಷದ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿ ಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿಗೆ ಹಾಗೂ ಅಧ್ಯಾಪಕರಿಗೆ ತಲಾ ರೂ. ಒಂದು ಸಾವಿರದಂತೆ ರೂ. 7 ಲಕ್ಷದ 21 ಸಾವಿರ ಸೇರಿದಂತೆ ಒಟ್ಟು ರೂ. 1 ಕೋಟಿ 5 ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಪ್ರೋ.ಪಿ. ಎಲ್. ಧರ್ಮರವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಹತ್ತರೊಳಗಿನ ರ‍್ಯಾಂಕ್ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಪ್ರಕಟಣೆ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಡಿಸೆಂಬರ್ 22 ರಂದು ನಡೆಯುವ ಎರಡನೇ ಹಂತದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಕಳೆದ ವರ್ಷ ಸಂಸ್ಥೆಯಿಂದ ವಿದ್ಯಾರ್ಥಿ ವೇತನಕ್ಕಾಗಿ ಒಟ್ಟು 1 ಕೋಟಿ 79 ಲಕ್ಷದ 54 ಸಾವಿರ ಹಾಗೂ ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ರೂ. 51 ಲಕ್ಷದ 64 ಸಾವಿರವನ್ನು ನೀಡಲಾಗಿರುವುದನ್ನು ಸ್ಮರಿಸಿಕೊಳ್ಳ ಬಹುದು.

   

LEAVE A REPLY

Please enter your comment!
Please enter your name here