
ಆರ್. ಎಸ್. ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್ ದಾಖಲು
ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಆರ್.ಎಸ್.ಎಸ್. ಮುಖಂಡ ಡಾ. ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಆರ್.ಎಸ್.ಎಸ್. ಮುಖಂಡ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಮೇ 12 ರಂದು ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ಸಂಧರ್ಭ, ಕೋಮು ದ್ವೇಷ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಭಾರತೀಯ ನ್ಯಾಯ ಸಂಹಿತೆ ಅಡಿ Cr . ಸಂ. 60/2025, ಸೆಕ್ಷನ್ 353(2)ರಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.












