
ಬೈಯ್ಯುವುದು ಆತ್ಮಹತ್ಯೆಗೆ ಪ್ರಚೋದನೆಯಾಗಲ್ಲ ಸುಪ್ರೀಂ ಕೋರ್ಟ್
ಬೈಗುಳ ಆತ್ಮಹತ್ಯೆಗೆ ಪ್ರಚೋದನೆಯಲ್ಲ ಎಂದ ಸುಪ್ರೀಂಕೋರ್ಟ್, ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಚೋದನೆ ಆರೋಪದಿಂದ ಶಿಕ್ಷಕರೊಬ್ಬರನ್ನು ಖುಲಾಸೆಗೊಳಿಸಿ ಈ ತೀರ್ಪು ನೀಡಿದೆ.
ತಮಿಳುನಾಡಿನಲ್ಲಿ ವಿದ್ಯಾರ್ಥಿಯೊಬ್ಬನ ದೂರಿನ ಮೇರೆಗೆ ಹಾಸ್ಟೆಲ್ ಉಸ್ತುವಾರಿ ಶಿಕ್ಷಕರೊಬ್ಬರು ಮತ್ತೊಬ್ಬ ವಿದ್ಯಾರ್ಥಿಯನ್ನು ನಿಂದಿಸಿದ್ದು, ಆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಹಾಸ್ಟೆಲ್ ಉಸ್ತುವಾರಿ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು. ಮದ್ರಾಸ್ ಹೈಕೋರ್ಟ್ ಆರೋಪವನ್ನು ಎತ್ತಿ ಹಿಡಿದಿತ್ತು. ಅದನ್ನು ಶಿಕ್ಷಕ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವಿಚಾರಣೆ ನಡೆಸಿದ ಪೀಠ, ‘ಯಾರಾದರೂ ಬೈದಾಗ ಇಂತಹ ದುರಂತಕ್ಕೆ ಕಾರಣವಾಗುತ್ತದೆ ಎಂದು ಸಾಮಾನ್ಯ ಜನರೂ ಊಹಿಸಲು ಸಾಧ್ಯವಿಲ್ಲ ಎಂದಿದೆ.












