
ಕಾರ್ಕಳ : ಸ್ಕೂಟರ್ – ಕಾರು ಡಿಕ್ಕಿ; ಸವಾರೆ ಸಾವು
ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರೆ ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ನಿಟ್ಟೆಯಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ.
ಮೃತರನ್ನು ನಿಟ್ಟೆ ಗುಂಡಾಜೆ ನಿವಾಸಿ ಯಶವಂತಿ ಶೆಟ್ಟಿ ಎಂದು ಗುರುತಿಸಲಾಗಿದ್ದು, ಇವರು ಕಾರ್ಕಳದಿಂದ ಮನೆಗೆ ಹಿಂತಿರುಗುವಾಗ ನಿಟ್ಟೆ ಬಳಿ ಒಳ ರಸ್ತೆಗೆ ಸೇರಲು ಏಕಾಏಕಿ ಬಲಕ್ಕೆ ತಿರುಗಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸವಾರೆಯ ತಲೆಗೆ ತೀವ್ರ ಪೆಟ್ಟಾಗಿದ್ದು, ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.












