ಕ್ರೈಸ್ಟ್‍ಕಿಂಗ್: ವಿಶ್ವ ಪರಿಸರ ದಿನಾಚರಣೆ

0

ಕ್ರೈಸ್ಟ್‍ಕಿಂಗ್: ವಿಶ್ವ ಪರಿಸರ ದಿನಾಚರಣೆ

ಕ್ರೈಸ್ಟ್‍ಕಿಂಗ್ ಶಿಕ್ಷಣ ಸಂಸ್ಥೆಗಳ ವತಿಯಿಂದ ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅವರಣದಲ್ಲಿ ಅರಣ್ಯ ಇಲಾಖೆಯ ಕುಂದಾಪುರ ವಿಭಾಗ, ಮೂಡಬಿದ್ರೆ ಉಪವಿಭಾಗ ಹಾಗೂ ಕಾರ್ಕಳ ವಲಯದ ಅರಣ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ತಹಶೀಲ್ಡಾರ್ ಪ್ರದೀಪ್ ಅವರು ಮಾತನಾಡಿ, ‘ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿ ತಮ್ಮ ಮನೆಗಳಲ್ಲಿ ಗಿಡಗಳನ್ನು ನೆಟ್ಟು ಬೆಳಸಬೇಕು’ ಎಂದರು. ಮತ್ತೋರ್ವ ಅತಿಥಿ, ನಿಟ್ಟೆ ಗ್ರಾಮ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿಯಾದ ಆನಂದ್ ಎಸ್. ವಾರ್ತಿ ಮಾತನಾಡಿ, ‘ಪರಿಸರವಿದ್ದರೆ ಮಾತ್ರ ನಾವಿರಲು ಸಾಧ್ಯ. ಆದ್ದರಿಂದ, ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ’ ಎಂದರು.

ಬಳಿಕ ವಿದ್ಯಾರ್ಥಿಗಳು ಕ್ರಿಸ್ತ ಸೇವಕಿ ಆಶ್ರಮ ಪರ್ಪಲೆ ಇಲ್ಲಿಯ ವೃದ್ಧಾಶ್ರಮಕ್ಕೆ ಭೇಟಿ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ದಳ ಹಾಗೂ ವಿಜ್ಞಾನ ಸಂಘದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಇಲ್ಲಿಯ ಧರ್ಮಗುರುಗಳಾದ ರೆವರೆಂಡ್ ಫಾದರ್ ಬುಖಾರ್ಟ್ ಬರ್ಟಿ ಅಮನ್ನಾ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿ, ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗಿ ಬಾಳಿ ಎಂದು ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ವಿವಿಧ ರೀತಿಯ ಗಿಡಗಳನ್ನು ನೆಟ್ಟರು.

ಸ್ಕೌಟ್ಸ್ ಮತ್ತು ಗೈಡ್ ಶಿಕ್ಷಕರಾದ ಪ್ರಕಾಶ್ ನಾಯ್ಕ್, ಕೃಷ್ಣ ಪ್ರಸಾದ್, ಶ್ರೀಮತಿ ಆಶಾಜ್ಯೋತಿ, ಶ್ರೀಮತಿ ಜಯಲಕ್ಷ್ಮೀ ಕಾರ್ಯಕ್ರಮ ಸಂಘಟಿಸಿದ್ದರು. ಕಾರ್ಯಕ್ರಮದಲ್ಲಿ ಅರಣ್ಯ ಅಧಿಕಾರಿ ಹುಕ್ರಪ್ಪ ಗೌಡ ಹಾಗೂ ಸಿಬ್ಬಂದಿ, ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ ಉಪಸ್ಥಿತರಿದ್ದರು.

   

LEAVE A REPLY

Please enter your comment!
Please enter your name here