ಹೆಬ್ರಿ : ಬೈಕ್ – ಓಮ್ನಿ ಡಿಕ್ಕಿ; ಬೈಕ್ ಸವಾರನಿಗೆ ಗಾಯ
ಹೆಬ್ರಿ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಬೈಕ್ ಮತ್ತು ಓಮ್ನಿ ನಡುವೆ ಅಪಘಾತವಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.
ಹೆಬ್ರಿ ಕಡೆಯಿಂದ ಶಿವಪುರ ಕಡೆಗೆ ಚಲಿಸುತ್ತಿದ್ದ ಬೈಕ್ ಗೆ, ಉಡುಪಿ ಕಡೆಯಿಂದ ಹೆಬ್ರಿ ಕಡೆಗೆ ವೇಗವಾಗಿ ಮತ್ತು ಅಜಾಗರೂಕತೆಯಿಂದ ಓಮ್ನಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ತಲೆ ಭಾಗ ಮತ್ತು ಕಾಲಿಗೆ ಗಾಯಗಳಾಗಿವೆ.
ಘಟನೆ ಸಂಬಂಧ ಬೈಕ್ ಸವಾರನ ತಮ್ಮ ನೀಡಿದ ದೂರಿನ ಅನ್ವಯ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.