ಕಾರ್ಕಳ: ಪೋಲಿಸ್ ಠಾಣೆಯಲ್ಲಿ ಶಾಂತಿ ಸಭೆ

0

ಕಾರ್ಕಳ: ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ನಗರ ಪೊಲೀಸ್ ಠಾಣೆ ಹಾಗೂ ಗ್ರಾಮಾಂತರ ಗ್ರಾಮಾಂತರ ಪೊಲೀಸ್ ಠಾಣಾ ವತಿಯಿಂದ ಕಾರ್ಕಳ ಪೋಲಿಸ್ ಠಾಣೆಯಲ್ಲಿ ಇಂದು ಬೆಳಿಗ್ಗೆ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಕಳ ನಗರ ಠಾಣಾ ಅಪರಾಧ ವಿಭಾಗದ ಠಾಣಾಧಿಕಾರಿ ಶಿವಕುಮಾರ್, ‘ಬಕ್ರೀದ್ ಹಬ್ಬವನ್ನು ಶಾಂತ ರೀತಿಯಿಂದ ಆಚರಿಸಿ ಶಾಂತಿಯನ್ನು ಕಾಪಾಡಿಕೊಳ್ಳಿ. ಯಾವುದೇ ಅಹಿತರ ಘಟನೆ ಆಗದ ಹಾಗೆ ನೋಡಿಕೊಳ್ಳಿ. ಏನಾದರೂ ಅಂತ ಘಟನೆ ಸಂಭವಿಸುವ ಸಾಧ್ಯತೆ ಇದ್ದರೆ ನಮಗೆ ಕೂಡಲೇ ತಿಳಿಸಿ’ ಎಂದು ಹೇಳಿದರು.

ಈ ಸಭೆಯಲ್ಲಿ ಕಾರ್ಕಳ ತಾಲೂಕಿನ ಎಲ್ಲಾ ಮಸೀದಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಗ್ರಾಮಾಂತರ ಅಪರಾಧ ವಿಭಾಗದ ಠಾಣಾಧಿಕಾರಿ ಸುಂದರರವರು ವೇದಿಕೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ನಿರೂಪಿಸಿದರು.

   

LEAVE A REPLY

Please enter your comment!
Please enter your name here