ಕಾರ್ಕಳ: ಕುಚ್ಚೂರು ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 2.05 ಕೋಟಿ ಅನುದಾನ
ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ರೂ. 02.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜನ ಜಾತಿಯ ಮಹಾ ನ್ಯಾಯ ಅಭಿಯಾನದಡಿ ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶವಾದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾತ್ಕಲ್ ಕೊರಗ ಕಾಲೋನಿ ರಸ್ತೆ ಕಾಂಕ್ರೀಟೀಕರಣಕ್ಕಾಗಿ 02.05 ಕೋಟಿ ರೂ. ಮೊತ್ತದ ಅನುದಾನ ಬಿಡುಗಡೆಯಾಗಿದ್ದು, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದೆ.
ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಆದಷ್ಟು ಶೀಘ್ರವಾಗಿ ಕಾಮಗಾರಿಯನ್ನು ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.