Saturday, June 14, 2025
Google search engine
Homeಕಾರ್ಕಳಹೆಬ್ರಿ: ಎಸ್. ಅರ್ ಪದವಿ ಪೂರ್ವ ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

ಹೆಬ್ರಿ: ಎಸ್. ಅರ್ ಪದವಿ ಪೂರ್ವ ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

ಎಸ್. ಅರ್. ಪದವಿ ಪೂರ್ವ ಕಾಲೇಜಿನಲ್ಲಿ 2025 – 2026ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಒಂದು ದಿನದ ಓರಿಯಂಟೇಷನ್ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುಧಾಕರ್ ಕೆ.ಜಿ ಯವರು, ಯಶಸ್ಸು ಎನ್ನುವುದು ಕೇವಲ ಅದೃಷ್ಟವಲ್ಲ. ಪರಿಶ್ರಮ, ಸತತ ಪ್ರಯತ್ನದಿಂದ ಯಶಸ್ಸು ದೊರೆಯುತ್ತದೆ. ಬದುಕಿನಲ್ಲಿ ಶಿಕ್ಷಣದ ಮಹತ್ವ ಹಾಗೂ ಪೋಷಕರ ಕನಸನ್ನು ವಿದ್ಯಾರ್ಥಿಗಳು ಸಾಕಾರಗೊಳಿಸಬೇಕು ಎಂದರು.

ಸಂಸ್ಥೆಯ ಅಧ್ಯಕ್ಷ ಹೆಚ್. ನಾಗರಾಜ್ ಶೆಟ್ಟಿಯವರು ಮಾತನಾಡಿ, ಕಲಿಯುವಾಗ ಮನಸಿಟ್ಟು ಕಲಿತರೆ ಗುರಿ ತಲುಪಲು ಸಾಧ್ಯ ಎಂದು ಮಾರ್ಗದರ್ಶನ ನೀಡಿದರು. ಬಳಿಕ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ವಿದ್ಯಾರ್ಥಿಗಳು ಸ್ವ ಅಧ್ಯಯನದ ಜೊತೆಗೆ ಪದೇ ಪದೇ ಗುರಿಯನ್ನು ಬದಲಾಯಿಸಬಾರದು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ರವರು ಮಾತನಾಡಿ, ಕಾಲೇಜಿನ ಶಿಕ್ಷಣ, ಶಿಸ್ತು, ನಿಯಮದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಗೊಂಡ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಅರ್ಥಶಾಸ್ತ್ರ ಉಪನ್ಯಾಸಕರಾದ ಅಮೃತ್ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ತಿಳಿಸಿದರು. ಭೌತಶಾಸ್ತ್ರ ಉಪನ್ಯಾಸಕಿಯಾದ ಗೀತಾ ಪ್ರಭು ನಿರೂಪಿಸಿ, ರಸಾಯನಶಾಸ್ತ್ರ ಉಪನ್ಯಾಸಕಿಯಾದ ಪ್ರೀತಿ ಹೆಗ್ಡೆ ಸ್ವಾಗತಿಸಿ, ಜೀವಶಾಸ್ತ್ರ ಉಪನ್ಯಾಸಕಿಯಾದ ಶುಭಲಕ್ಷ್ಮಿ ವಂದಿಸಿದರು.

RELATED ARTICLES
- Advertisment -
Google search engine

Most Popular

Recent Comments

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments