
ಕಾರ್ಕಳ: ಬಿಜೆಪಿ ವತಿಯಿಂದ ಜೂನ್ 16 ವಿಕಸಿತ ಭಾರತ ಸಂಕಲ್ಪ ಸಭೆ- ನವೀನ್ ನಾಯಕ್
ಕಾರ್ಕಳ ಬಿಜೆಪಿ ವತಿಯಿಂದ ಜೂನ್ 16 ವಿಕಸಿತ ಭಾರತ ಸಂಕಲ್ಪ ಸಭೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 2025 ರಲ್ಲಿ ಕೇಂದ್ರ ಸರ್ಕಾರದ 11 ವರ್ಷಗಳು ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ, ಸರ್ಕಾರದ ಸಾಧನೆಗಳನ್ನು ಪ್ರತಿ ನಾಗರಿಕನಿಗೂ ತಲುಪಿಸುವುದು, ಯೋಜನೆಗಳ ಲಾಭವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸೇವೆ, ಸುಶಾಸನ, ಬಡವರ ಕಲ್ಯಾಣ ಹಾಗೂ ವಿಕಸಿತ ಭಾರತದ ಪರಿಕಲ್ಪನೆಯುಳ್ಳ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ಈ ಪ್ರಯುಕ್ತ ಕಾರ್ಕಳ ಬಿಜೆಪಿ ವತಿಯಿಂದ ವಿಕಾಸ ಜನಸೇವಾ ಕಛೇರಿಯಲ್ಲಿ ಜೂನ್ 16 ಬೆಳಿಗ್ಗೆ 10.00 ಗಂಟೆಗೆ ವಿಕಸಿತ ಭಾರತ ಸಂಕಲ್ಪ ಸಭೆಯನ್ನು ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮತ್ತು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಉಪಸ್ಥಿತರಿದ್ದು, ಈ ಸಂದರ್ಭದಲ್ಲಿ ವಿಕಸಿತ ಭಾರತ 2047 ರ ದೃಷ್ಟಿಕೋನ ಹಾಗೂ ಅದರಲ್ಲಿ ನಮ್ಮ ಪಾತ್ರದ ಕುರಿತು ಕಾರ್ಯಗಾರ ನಡೆಯಲಿದೆ. ಎಂದು ಪ್ರಕಟಣೆಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಶ್ರೀ ನವೀನ್ ನಾಯಕ್ ತಿಳಿಸಿದ್ದಾರೆ.












