ಕಾರ್ಕಳ : ಇನ್ನೂ ಒಂದು ತಿಂಗಳು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

0

ಕಾರ್ಕಳ : ಇನ್ನೂ ಒಂದು ತಿಂಗಳು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಅಮೃತ್ 2.0 ಕುಡಿಯುವ ನೀರು ಸರಬರಾಜು ಯೋಜನೆಯಡಿ ಕಾರ್ಕಳ ಪುರಸಭೆ ವ್ಯಾಪ್ತಿಗೆ ಕುಡಿಯುವ ನೀರು ಪೂರೈಸುವ ಮುಂಡ್ಲಿ ರೇಚಕ ಸ್ಥಾವರದ ನವೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಮುಂದಿನ 30 ದಿನಗಳ ಕಾಲ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪುರಸಭೆ ಪ್ರಕಟಣೆ ತಿಳಿಸಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.

ನವೀಕರಣ ಕಾರ್ಯದ ಕಾರಣ, ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆ ಸಮಯ ಮತ್ತು ಪ್ರಮಾಣದಲ್ಲಿ ವ್ಯತ್ಯಯ ಉಂಟಾಗಲಿದೆ.

LEAVE A REPLY

Please enter your comment!
Please enter your name here