
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ವಸತಿ ಶಾಲೆ ವ್ಯವಸ್ಥೆ: ಮಧು ಬಂಗಾರಪ್ಪ
ರಾಜ್ಯದಲ್ಲಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಜುಲೈ ಅಂತ್ಯದೊಳಗೆ ವಸತಿಯುತ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಆರಂಭದಲ್ಲಿ 1,500 ಮಕ್ಕಳು ದಾಖಲಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಒಂದರಿಂದ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಹಾಗೂ ಸಕಾಲದಲ್ಲಿ ಚಿಕಿತ್ಸೆ ಮುಂದುವರಿಯಲು ಸರಕಾರ ವಿಶೇಷ ಕಾಳಜಿ ವಹಿಸಿದೆ. ಈ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆ (ಎನ್‌ಜಿಎ) ಜತೆ ಸಭೆ ನಡೆಸಿ ಯೋಜನೆ ರೂಪಿಸಲಾಗಿದೆ ಎಂದರು.
ಇದೇ ಸಂದರ್ಭ ಕ್ಯಾನ್ಸರ್ ಬಾಧಿತ ಮಕ್ಕಳ ಲಾಲನೆ-ಪಾಲನೆ ದೃಷ್ಟಿಯಿಂದ ಪೋಷಕರಿಗೂ ವಸತಿ ಸೌಲಭ್ಯ ಕೊಡಿಸಲು ಗಮನಹರಿಸಲಾಗಿದೆ ಎಂದರು.



































