ಕಾರ್ಕಳ: ಸರ್ಕಾರಿ ಪಾಲಿಟೆಕ್ನಿಕ್ ಕ್ಯಾಂಪಸ್ ಗೆ ಶಾಸಕ ವಿ. ಸುನಿಲ್‌ ಕುಮಾರ್‌ ಭೇಟಿ

0

ಕಾರ್ಕಳ: ಸರ್ಕಾರಿ ಪಾಲಿಟೆಕ್ನಿಕ್ ಕ್ಯಾಂಪಸ್ ಗೆ ಶಾಸಕ ವಿ. ಸುನಿಲ್‌ ಕುಮಾರ್‌ ಭೇಟಿ

ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ, ಅಧಿಕಾರಿಗಳೊಂದಿಗೆ ಸಭೆ

ಶಾಸಕರು ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಜೂ. 16 ರಂದು ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಪರಿಶೀಲನೆ ನಡೆಸಿ, ತಹಶೀಲ್ದಾರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪಾಲಿಟೆಕ್ನಿಕ್ ಕ್ಯಾಂಪಸ್ಸಿನಲ್ಲಿ ರೈಟ್ಸ್ ಮೂಲಕ ನೂತನವಾಗಿ ನಿರ್ಮಾಣಗೊಂಡ 1 ಕೋಟಿ ವೆಚ್ಚದ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು ಬಳಿಕ ಸುಮಾರು 3.97 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿ ಮೂಲಕ ನಿರ್ಮಿಸುತ್ತಿರುವ ಪಾಲಿಟೆಕ್ನಿಕ್ ಕಟ್ಟಡ ವೀಕ್ಷಿಸಿ ಅಧಿಕಾರಿಗಳಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಿದರು. ಜೊತೆಗೆ ಮಳೆಗಾಲದ ಪ್ರಕೃತಿ ವಿಕೋಪ ಮುನ್ನೆಚ್ಚರಿಕೆ ಅಂಗವಾಗಿ ಪಾಲಿಟೆಕ್ನಿಕ್ ವಠಾರದಲ್ಲಿ ಮಳೆ ನೀರು ಹರಿದು ಹೋಗಲು ಒಳಚರಂಡಿ ವ್ಯವಸ್ಥೆ ಹಾಗೂ ಹೈ ವೋಲ್ಟೇಜ್ ವಿದ್ಯುತ್ ಪರಿವರ್ತಕ ಮತ್ತು ಜನರೇಟರ್ ಗಳಿಗೆ ಪ್ರತ್ಯೇಕ ಮಾಡಿನ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರು ತಮ್ಮ ಪ್ರದೇಶಾಭಿವೃಧ್ಧಿ ಯೋಜನೆಯಡಿ ಪಾಲಿಟೆಕ್ನಿಕ್ ಕ್ಯಾಂಪಸ್ಸಿನಲ್ಲಿ 10 ಲಕ್ಷ ವೆಚ್ಚದಲ್ಲಿ ನಿರ್ಮಿಸ ಲಾಗುತ್ತಿರುವ ಬಾಲಕರ ಶೌಚಾಲಯ ಕಾಮಗಾರಿ ವೀಕ್ಷಿಸಿ, ಕ್ಯಾಂಪಸ್ಸಿನಲ್ಲಿ ಕಾರ್ಯಾಚರಿಸುತ್ತಿರುವ ತಮ್ಮ ಮಹತ್ವಾಕಾಂಕ್ಷೆಯ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್‌ ಇನ್ಸ್‌ಟ್ಯೂಟ್‌ (ಕೆಜಿಟಿಟಿಐ) ಕಾರ್ಯಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.

ಬಳಿಕ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆದ್ಯತೆಯ ಅನುಸಾರ ತ್ವರಿತವಾಗಿ ಪೂರ್ಣಗೊಳಿಸುವ ಕಾಮಗಾರಿಗಳು ಮತ್ತು ಹೆಚ್ಚುವರಿ ಅನುದಾನ ಪಡೆದು ಶೀಘ್ರ ಪೂರೈಸುವ ಕಾಮಗಾರಿಗಳ ಪಟ್ಟಿ ತಯಾರಿಸಿ, ತ್ವರಿತ ವಿಲೇವಾರಿಗಾಗಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

LEAVE A REPLY

Please enter your comment!
Please enter your name here