
ಬೈಲೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ
ಬೈಲೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ
ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು, ಇದರ 2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಶುಕ್ರವಾರದಂದು ನಡೆಯಿತು.
ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಪರಿವರ್ತಕರಾಗಿರುವ ಸುನಿತಾರವರು ದೀಪ ಬೆಳಗಿಸಿ ವಿದ್ಯಾರ್ಥಿ ಸಂಘಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಸಂಘಟನೆಯ ಮೂಲಕ ನಾಯಕತ್ವ ಗುಣವನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ನಾಯಕರಾಗಿ ಎಂದು ಹಾರೈಸಿದರು. ಹಾಗೆಯೇ ಪೋಕ್ಸೋ ಕಾಯಿದೆ ಬಗ್ಗೆ ವಿವರಣೆಯನ್ನು ನೀಡಿದರು.
ವೇದಿಕೆಯಲ್ಲಿ ಶಾಮಲಾ, ಕ್ರೀಡಾ ಸಂಯೋಜಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಹಾಗೂ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಕುಮಾರ್ ಅಕ್ಷಯ ಪೂಜಾರಿ, ಉಪಾಧ್ಯಕ್ಷೆ ಕುಮಾರಿ ಲೆನಿಷಾ ಬರ್ಬೋಜಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಸಂಚಾಲಕರಾದ ರತ್ನಾಕರ ಪೂಜಾರಿ ಸ್ವಾಗತಿಸಿ ಆಂಗ್ಲ ಭಾಷಾ ಉಪನ್ಯಾಸಕಿ ಜ್ಯೋತಿ ವಂದಿಸಿದರು. ಉಪನ್ಯಾಸಕ ನರಸಿಂಹವರ್ಧನ್ ಸಿ ಎಸ್ ನಿರೂಪಣೆಗೈದರು.




































