
ಕ್ರೈಸ್ಟ್ ಕಿಂಗ್ : ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಮಾಹಿತಿ ಕಾರ್ಯಕ್ರಮ
ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ ಮತ್ತು ಸಿಎಸ್ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಉದ್ಯೋಗ ಮತ್ತು ಕೌಶಲ್ಯ ತರಬೇತುದಾರ ಚಂದನ್ ರಾವ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಮಾತನಾಡಿದ ಅವರು “ವಾಣಿಜ್ಯ ವಿಭಾಗದ ಮಕ್ಕಳಿಗೆ ಅವಕಾಶಗಳು ಹೇರಳವಾಗಿವೆ. ಆದರೆ ಸಾಧಿಸಬೇಕಾದರೆ ಗುರಿಯನ್ನು ಇಟ್ಟುಕೊಂಡು ಕಾರ್ಯಪ್ರವೃತ್ತರಾಗಬೇಕು. ನಾಳೆಗಳಿಗೆ ಕಾಯದೆ ಜೀವನದಲ್ಲಿ ಇಂದು ಬರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಯಶಸ್ಸಿನ ಬೆನ್ನು ಹತ್ತಬೇಕಾದರೆ ಆತ್ಮವಿಶ್ವಾಸ ಬಹಳ ಮುಖ್ಯ” ಎಂದು ಹೇಳಿ ಸಿಎ, ಸಿಎಸ್ ಪರೀಕ್ಷೆಗಳಿಗೆ ಮಾಡಬೇಕಾದ ತಯಾರಿ ಹಾಗೂ ಯೋಜನೆಗಳ ಕುರಿತು ಸಹ ಸಮಗ್ರ ಮಾಹಿತಿ ನೀಡಿದರು.
ಸಂಸ್ಥೆಯ ಉಪ ಪ್ರಾಚಾರ್ಯ ಹಾಗೂ ವಾಣಿಜ್ಯ ವಿಭಾಗ ಮುಖ್ಯಸ್ಥ ಡಾ.ಪ್ರಕಾಶ್ ಭಟ್, ಸಂಸ್ಥೆಯ ಸಿಎ, ಸಿಎಸ್ ಸಂಯೋಜಕರಾದ ಅರ್ಥಶಾಸ್ತ್ರ ಉಪನ್ಯಾಸಕಿ ಅಭಿನಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಜಿತೇಶ್ ಸ್ವಾಗತಿಸಿ ದಿಶಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಮದಿಹಾ ಫಾತಿಮ ಕಾರ್ಯಕ್ರಮ ನಿರೂಪಿಸಿ ಪ್ರಜ್ವಲ್ ಶೆಟ್ಟಿ ವಂದಿಸಿದರು.






































