ದ್ವಿಚಕ್ರ ವಾಹನವೊಂದಕ್ಕೆ ಪಿಕಪ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಹೆಬ್ರಿಯ ಚಾರ ನ್ಯಾಯಬೆಲೆ ಅಂಗಡಿಯ ಬಳಿ ನಡೆದಿದೆ.
ಪಿಕಪ್ ಚಾಲಕ ಅತಿವೇಗ ಹಾಗೂ ನಿರ್ಲಕ್ಷತನದಿಂದ ವಾಹನ ಚಲಾಯಿಸಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ರಸ್ತೆ ಮೇಲೆ ಬಿದ್ದ ಸವಾರ ಸೀತಾರಾಮ ಎಂಬರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.