ಕಾರ್ಕಳ : ಬೈಕ್-ಕಾರು ಡಿಕ್ಕಿ
ಶಿವತಿಕೆರೆ ಬಳಿ ಬೈಕ್ ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆಡಿದ್ದು, ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಕಾರ್ಕಳ ಕಡೆಯಿಂದ ಪುಲ್ಕೆರಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಶಿವತಿಕೆರೆ ಬಳಿ ಯು ಟರ್ನ್ ಹೊಡೆಯುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಗಾಯಗೊಂಡ ಬೈಕ್ ಸವಾರ ಸನತ್ ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಗಾಯಾಳು ಸನತ್ ಕೊಟ್ಟ ದೂರಿನ ಪ್ರಕಾರ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.