ಜ್ಞಾನಸುಧಾ : ಜೂನ್ 28 ರಂದು ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ‘ಮೌಲ್ಯಸುಧಾ’

0

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದ್ದು, ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ಜೂನ್ 28 (ಶನಿವಾರ)ರಂದು ಸಂಜೆ 6 ಗಂಟೆಗೆ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ – ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರು ಇಲ್ಲಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದು, ‘ಸ್ವನಿಯಂತ್ರಣ : ಬಂಧನವೋ? ಸ್ವಾತಂತ್ರ್ಯವೋ?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸ ಬಹುದೆಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

   

LEAVE A REPLY

Please enter your comment!
Please enter your name here