
ಕಾರ್ಕಳ ತಾಲ್ಲೂಕು ಬೈಲೂರು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024 25ರ ದ್ವಿತೀಯ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಕಾಲೇಜಿನ ಕೀರ್ತಿ ಪತಾಕೆಯನ್ನು ಬಹು ಎತ್ತರಕ್ಕೆ ಏರಿಸಿದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣಾ ಕಾರ್ಯಕ್ರಮ ಜರಗಿತು. 31 ವಿದ್ಯಾರ್ಥಿಗಳು ಸನ್ಮಾನವನ್ನು ಸ್ವೀಕರಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸೀತಾರಾಮ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಕಾರ್ಕಳ ಕ.ಸಾ.ಪ. ಘಟಕದ ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆತ್ಮವಿಶ್ವಾಸವೇ ನಮ್ಮ ಭವಿಷ್ಯವನ್ನು ರೂಪಿಸಬಲ್ಲದು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ವಾಗ್ಲೆ ಶುಭ ಹಾರೈಸಿದರು. ಉಪನ್ಯಾಸಕ ಪ್ರಮೋದ್ ನಾಯಕ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ನರಸಿಂಹವರ್ಧನ್ಸಾ ಸ್ವಾಗತಿಸಿದರು. ಸಾಧಕ ವಿದ್ಯಾರ್ಥಿಗಳ ಪರಿಚಯವನ್ನು ಉಪನ್ಯಾಸಕಿ ಶ್ರೀಮತಿ ಸುಜಾತ ನಾಯಕ್ ಮಾಡಿದರೆ, ಉಪನ್ಯಾಸಕ ರತ್ನಾಕರ ಪೂಜಾರಿ ವಂದನಾರ್ಪಣೆಗೈದರು.












